Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ; 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇನ್ನು ಮೂರು ದಿನಗಳಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳು ಸೇರಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಜೂನ್ 25ರಿಂದ ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿನ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.


Related Articles

Back to top button