ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ 7 ವರ್ಷಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಾರ್ಚ್ 28ರಂದು ಅತ್ಯಧಿಕ ತಾಪಮಾನ ದಾಖಲಾಗಿದೆ.
ಮಾರ್ಚ್ 28 ಗುರುವಾರ ಬೆಂಗಳೂರಿನಲ್ಲಿ 37.9 ಡಿಗ್ರಿ ಗರಿಷ್ಠ ತಾಪಮಾನ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ತಾಪಮಾನ ಹೆಚ್ಚಳದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇದೆ.
ರಾಯಚೂರು ಜಿಲ್ಲೆಯ ಹಡಗನಾಳ್ ಹೋಬಳಿಯಲ್ಲಿ ಅತ್ಯಧಿಕ 42.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ , ಬೀದರ್, ಗದಗ, ದಾವಣಗೆರೆ, ತುಮಕೂರು, ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆಗಳಲ್ಲಿ 41-42.6 ಡಿಗ್ರಿ ಗರಿಷ್ಠ ತಾಪಮಾನ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ