ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆಯ ಅಬ್ಬರ ರಾಜ್ಯದಲ್ಲಿ ಕಡಿಮೆಯಾಗಿದ್ದು, ಜನರು ಕೊಂಚ ನಿಟ್ಟುಸಿರು ಬಿಡುತ್ತಿರುವಾಗಲೇ ಮತ್ತೊಮ್ಮೆ ಭಾರಿ ಮಳೆ ಎಚ್ಚರಿಕೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ, ಮಲೆನಾಡು ಸೇರಿದಂತೆ ಜುಲೈ 25ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗಲಿದೆ. ಈಗಾಗಲೇ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ನಡೆದಿದ್ದು, ರಸ್ತೆ ಸಂಪರ್ಕ ಕೂಡ ಕಡಿತಗೊಂಡಿದೆ. ಉತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದೆ. 2-3 ದಿನಗಳಿಂದ ಸ್ವಲ್ಪ ತಣ್ಣಗಾಗಿದ್ದ ಮಳೆರಾಯ ಮತ್ತೆ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಂಗಾಂಗ ದಾನ ಮಾಡಿ ನಾಲ್ಕು ಜೀವಗಳಿಗೆ ಬದುಕು ಕೊಟ್ಟ ಯುವಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ