Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬರದ ಛಾಯೆಯಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ಕೊಂಚ ನಿರೀಕ್ಷೆ ಹುಟ್ಟಿಸುವಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇನ್ನು ನಾಲ್ಕುದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 4ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.

Home add -Advt

ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಧಾರವಾಡ, ಯಾದಗಿರಿ, ಹಾವೇರಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ.


Related Articles

Back to top button