Kannada NewsKarnataka NewsLatest
*ಕೆಲ ಜಿಲ್ಲೆಗಳಲ್ಲಿ ಕೊಂಚ ಕಡಿಮೆಯಾದ ವರುಣಾರ್ಭಟ; ಕರಾವಳಿಯಲ್ಲಿ ಭಾರಿ ಮಳೆ ಮನ್ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ಕೆಲ ದಿನಗಳಿಂದ ಆರ್ಭಟಿಸಿದ್ದ ಮಳೆರಾಯನ ಕೆಲ ಜಿಲ್ಲೆಗಳಲ್ಲಿ ಕೊಂಚ ತಣ್ಣಗಾಗಿದ್ದು, ಕರಾವಳಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮತ್ತೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಸ್ವಲ್ಪ ತಗ್ಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿ ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸಲಿದೆ
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿಯೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಆಗಾಗ ಬಿಸಿಲು ಗೋಚರಿಸುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ