Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಕೊರತೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಲಿದೆ. ಒಂದು ವಾರಗಳ ಕಾಲ ಕರಾವಳಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಳಗವೈ ಬೀದರ್, ಧಾರವಾಡ, ಕಲಬುರ್ಗಿ, ಗದಗ, ಹಾವೇರಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt


Related Articles

Back to top button