Kannada NewsKarnataka NewsLatest

*ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗಲಿದ್ದು, ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಹಲವು ಭಾಗಗಳಲ್ಲಿ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.

Home add -Advt

ಬೆಳಗಾವಿ, ಬಾಗಲಕೋಟೆ, ಬಿದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನರ, ಚಿಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ನೈರುತ್ಯ ಮುಂಗಾರು ಕರಾವಳಿ ಭಾಗದಲ್ಲಿ ಚುರುಕಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದೆ ಎಂದು ಹೇಳಲಾಗಿದೆ.

Related Articles

Back to top button