Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಿರುಗಾಳಿ ಗಂಟೆಗೆ 45-55 ಕೀ,ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

Home add -Advt

ಕರಾವಳಿ ಜಿಲ್ಲೆಗಳು ಹಾಗೂ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ ಸೇರಿದಂತೆ 11 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೆಳೆಗೆ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button