Karnataka NewsLatest

*ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಮತ್ತೆ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಳೆದ ಒಂದು ತಿಂಗಳಿಂದ ನಿರಂತರವಾಗಿ ಕರಾವಳಿ, ಮಲೆನಾಡು ಭಾಗದಲ್ಲಿ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಕಲೆದ ಎರಡು ಮೂರು ದಿನಗಳಿಂದ ಕೊಂಚ ತಣ್ಣಗಾಗಿದ್ದ. ಇದೀಗ ನಿನ್ನೆಯಿಂದ ಮತ್ತೆ ಮಳೆಯ ಅಬ್ಬರ ಮತ್ತೆ ಶುರುವಾಗಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಇಂದಿನಿಂದ ಒಂದು ವಾರಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಬೀದರ್,ಧಾರವಾದ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಲ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರ, ದಾವಣಗೆರೆ ಜಿಲ್ಲೆಯಲ್ಲಿಯೂ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋದಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.


Related Articles

Back to top button