Kannada NewsKarnataka NewsLatest

*ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮುಂದಿನ 3 ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುನಾರ್ಭಟ ಹೆಚ್ಚಾಗಲಿದೆ. ಹಾಸನ, ಶಿವಮೊಗ್ಗ, ಮಡಿಕೇರಿ ಮತ್ತು ಬೆಳಗಾವಿ ಭಾಗದಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಈ ಭಾಗಗಳಿಗೆ ಇನ್ನೂ 2 ದಿನಗಳ ಕಾಲ ಯಲ್ಲೋ ಅಲಟ್೯ ಘೋಷಣೆ ಮಾಡಲಾಗಿದೆ.

3 ದಿನಗಳ ಬಳಿಕ ಈ ಭಾಗಗಳಲ್ಲಿ ಹಂತ-ಹಂತವಾಗಿ ಮಳೆ ಕಡಿಮೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಯಾದಗಿರಿ ರಾಯಚೂರು, ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆ ಇದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button