Kannada NewsKarnataka NewsLatest

*ಮತ್ತೆ ಮಹಾಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಹಾಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲಿಯೂ ಮಳೆಯಾಗಲಿದೆ.

ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

Related Articles

Back to top button