Kannada NewsKarnataka NewsLatest

*ಮುಂಗಾರು ದುರ್ಬಲದ ನಡುವೆ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಈ ಭಾಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವೆಡೆ ಮಳೆಯ ಸುಳಿವಿಲ್ಲ. ಬರದ ಛಾಯೆ ಜನರನ್ನು ಕಂಗೆಡಿಸಿದೆ. ಕೆಲ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಮುಂಗಾರು ದುರ್ಬಲವಾಗುತ್ತಿದ್ದಂತೆ ತಾಪಮಾನ ಏರಿಕೆಯಾಗಿತ್ತಿದೆ. ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಜುಲೈ 17 ಹಾಗೂ 18ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಂಕೋಲಾ ತಾಲೂಕಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರಿ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು (ಜುಲೈ 17) ರಜೆ ಘೋಷಿಸಿ ಅಂಕೋಲಾ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಯಿಂದಾಗಿ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ.

Home add -Advt

ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮುಖ್ಯವಾಗಿ 30-40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಜುಲೈ 18ರಂದು ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಗಾಳಿ ಮುಂದುವರಿಯುವ ಸಾಧ್ಯತೆ ಇದೆ.

ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಜುಲೈ 18ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

Related Articles

Back to top button