
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆ ಮುಂದುವರೆಯಲಿದೆ. ಅದರಲ್ಲಿಯೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ವರುಣಾರ್ಭಟ ಜೋರಾಗಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಹಾವೇರಿ, ಕಲಬುರ್ಗಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಅತಿ ಮಳೆಯಾಗಲಿದೆ ಎಂದು ಹಲವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ವಿರಲಿದ್ದು, ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ