Kannada NewsKarnataka NewsLatest

*ಮುಂಗಾರು ಮಳೆ ಅಬ್ಬರ ಕರಾವಳಿಯ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ತೀರದಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರು ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

Home add -Advt

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.

ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಅತಿ ಭಾರಿ ಮಳೆಯಾಗಲಿದೆ. ಹಾವೇರಿ, ವಿಜಯಪುರ, ಕಲಬುರಗಿ, ರಾಯಚೂರು, ಬಾಗಲಕೋಟೆ, ಬೀದರ್, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ದಾವಣಗೆರೆ, ಬಳ್ಳಾರಿ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ 40 ರಿಂದ 60 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Related Articles

Back to top button