Kannada NewsKarnataka NewsLatestPolitics

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ.

ಕರಾವಳಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸೆ.21ರವರೆಗೆ ಮಳೆಯಾಗಲಿದೆ. ಉಳಿದಂತೆ ಬೆಳಗಾವಿ, ಬೀದರ್, ಬಳ್ಳಾರಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಜಿಲ್ಲೆಗಳಲ್ಲಿ ಸೆ.18ರವರೆಗೆ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Home add -Advt

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇದ್ದು, ರಾತ್ರಿ ವೇಳೆಗೆ ಮಳೆಯಾಗಲಿದೆ.


Related Articles

Back to top button