*ಯಾವ ಜಿಲ್ಲೆಗಳಲ್ಲಿ ಮಳೆ, ಯಾವ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಳ? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೀದರ್, ಬೆಳಗಾವಿ, ಧಾರವಾಡ, ಕೊಪ್ಪಳ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಕರ್ನಾಟಕ ಭಾಗದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳಲ್ಲಿಯೂ ಉಷ್ಣಾಂಶ 1-2ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ