Kannada NewsKarnataka NewsLatest

*ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಂದೆಡೆ ಬಿಸಿಲ ಧಗೆ, ಮತ್ತೊಂದೆಡೆ ಬರಗಾಲದಿಂದ ರಾಜ್ಯದ ಜನರು ತತ್ತರಿಸಿದ್ದಾರೆ. ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕೊಂಚ ಸಮಾಧಾನ ತಂದಿದೆ.

ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿನವೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಹಲವೆಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button