ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಅಬ್ಬರ ನಿಯಂತ್ರಿಸಲು 2 ತಿಂಗಳ ಕಾಲ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಬೇಕು ಎಂದು ಐಸಿಎಂಆರ್ ಸಲಹೆ ನೀಡಿರುವ ಬೆನ್ನಲ್ಲೇ ಡಿಸಿಎಂ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ನಡೆದಿರುವ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಮಹತ್ವ ಪಡೆದುಕೊಂಡಿದೆ.
ವಿಧಾನಸೌಧದಲ್ಲಿ ಟಾಸ್ಕ್ ಫೋರ್ಸ್ ಸಭೆ ಆರಂಭವಾಗಿದ್ದು, ರಾಜ್ಯದಲ್ಲಿ ಕೊರೊನಾ ಆಕ್ಟೀವ್ ಕೇಸ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮ ಹಾಗೂ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಐಸಿಎಂಆರ್ ಸೂಚಿಸಿರುವ 6-8 ವಾರಗಳ ಲಾಕ್ ಡೌನ್ ಬಗ್ಗೆಯೂ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಶೇ.10ರಷ್ಟು ಕೋವಿಡ್ ಆಕ್ಟೀವ್ ಕೇಸ್ ಗಳಿರುವ ಜಿಲ್ಲೆಗಳಲ್ಲಿ 2 ತಿಂಗಳ ಲಾಕ್ ಡೌನ್ ಜಾರಿ ಮಾಡಬೇಕು. 3ನೇ ಅಲೆ ತಡೆಯಲು ಲಾಕ್ ಡೌನ್ ಒಂದೇ ಸೂಕ್ತ ಮಾರ್ಗ ಎಂದು ಐಸಿಎಂಆರ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಮೇ 24ರ ಬಳಿಕವೂ ವಿಸ್ತರಣೆ ಮಾಡುವ ಬಗ್ಗೆ ಇಂದಿನ ಟಾಸ್ಕ್ ಫೋರ್ಸ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಬೆಳಗಾವಿ ಉಪ ತಹಶೀಲ್ದಾರ್ ಕೊರೊನಾಗೆ ಬಲಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ