Cancer Hospital 2
Beereshwara 36
LaxmiTai 5

*ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ರಾಯಚೂರು ಸೇರಿದಂತೆ ಹಲವು ಜಿಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಬೆಂಗಳೂರು ನಗರದಲ್ಲಿಯೂ ದಾಳಿ ನಡೆದಿದೆ. ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಮನೆ ಸೇರಿದಂತೆ 10 ಕಡೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಜಿತ್ ಮನೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಸಿಕ್ಕಿದೆ.

Emergency Service

ತುಮಕೂರಿನಲ್ಲಿ ಕೃಷಿ ಇಲಾಖೆ ಜೆಡಿ ರವಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಹೆಸ್ಕಾಂ ‌ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆ ಮೇಲೆ ದಾಳಿ ಮಾಡಲಾಗಿದೆ. ಸದ್ಯ ಶೇಖರ್ ಬಹುರೂಪಿ ಬಳ್ಳಾರಿಯ ಹರಪನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಾಗಲಕೋಟೆಯ ಕೃಷಿ ಜೆಡಿ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.


Bottom Add3
Bottom Ad 2