Kannada NewsKarnataka NewsLatest

*ರಾಜ್ಯಾದ್ಯಂತ ಏಕಕಾಲಕ್ಕೆ ಹಲವು ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕಂಕಣ ಬದ್ಧವಾಗಿರುವ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ ದಾಳಿ ನಡೆಸಿದ್ದಾರೆ. ಕಲಬುರಗಿ ಜೆಸ್ಕಾಂ ಎಇಇ ಅಮೃತ್ ರಾವ್ ಯಲಾಲ್ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿಯ ಜಾಗೃತಿ ಕಾಲೋನಿಯಲ್ಲಿರುವ ಮನೆ, ಅಪಾರ್ಟ್ ಮೆಂಟ್, ಕೊತ್ತಂಬರಿ ಲೇಔಟ್ ನಲ್ಲಿರುವ ಜೆಸ್ಕಾಂ ಕಚೇರಿ ಮೇಲೂ ದಾಳಿ ನಡೆಸಲಾಗಿದೆ. 20 ಎಕರೆ ಜಮೀನು ಹೊಂದಿರುವ ಅಮೃತ್ ರಾವ್ ಅವರ 7 ಸ್ಥಳಗಳ ಮೇಲೆ ದಾಳಿ ನಡೆದಿದೆ.

ಧಾರವಾಡದಲ್ಲಿ ಎಸಿಎಫ್ ಕಿರಣ್ ಅಂಗಡಿ ಮನೆ ಹಾಗೂ ಕಚೇರಿ ಮೇಲೂ ದಾಳಿ ನಡೆದಿದೆ. ಅಳ್ನಾವರ್ ರಸ್ತೆಯಲ್ಲಿನ ಫಾರ್ಮ್ ಹೌಸ್, ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಫ್ಯಾಕ್ಟರಿ ಮೇಲೂ ದಾಳಿ ನಡೆಸಲಾಗಿದೆ.

ಚಿತ್ರದುರ್ಗದಲ್ಲಿ ಎರದು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಬಬ್ಬೂರು ತೋಟಗಾರಿಕಾ ವಿವಿ ಪ್ರೊ.ಶಂಕರ್ ಮನೆ ಮೇಲೆ ಹಾಗೂ ಚಿತ್ರದುರ್ಗದ ಆರ್ ಎಫ್ ಒ ದುರ್ಗಪ್ಪ ಮನೆಮೇಲೂ ದಾಳಿ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button