ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎನ್ ಐಎ ಅಧಿಕಾರಿಗಳು ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 44 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಐಸಿಸ್ ಉಗ್ರರ ಸಂಚಿನ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ತಂಡ ಕರ್ನಾಟಕದ ಒಂದು, ಮಹಾರಾಷ್ಟ್ರದ ಪುಣೆಯ 2 ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರ 9 ಹಾಗೂ ಭಾಯಂದರ್ ನಲ್ಲಿ ಒಂದು ಸ್ಥಳಗಳಲ್ಲಿ ದಾಳಿ ನಡೆಸಿದೆ.
ಐಸಿಸ್ ಭಯೋತ್ಪಾಧನೆ ಪ್ರಕರಣದಲ್ಲಿ ಇವರೆಗೆ 13 ಶಂಕಿತರನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಿದ್ದಾರೆ. ಇಂದಿನ ದಾಳಿಯಲ್ಲಿ ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ