Karnataka News

*ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭವಾಗಿದೆ. 9 ದಿನಗಳ ಕಾಲ ಮುಂಗಾರು ಅಧಿವೇಶ ನಡೆಯಲಿದೆ.

ಇಂದಿನಿಂದ ಜುಲೈ 26ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ. ಕಲಾಪದಲ್ಲಿ ಶಾಸಕರ ಹಾಜರಾತಿ ಗುರುತಿಸಲು ಎಐ ಆಧಾರಿತ ಕ್ಯಾಮರಾ ಬಳಸಲಾಗುತ್ತಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ಈಗಾಗಲೇ ಅಧಿವೇಶನ ಆರಂಭವಾಗಿದ್ದು. ಮೊದಲ ದಿನ ಕಲಾಪದಲ್ಲಿ ವಿಧನಸಭೆಯಲ್ಲಿ ಸ್ಪೀಕರ್ ಖಾದರ್, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಚಾಮರಾಜನಗರದ ಮಾಜಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ, ನಟ, ನಿರ್ಮಾಪಕ ದ್ವಾರಕೀಶ್, ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button