ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಮುಂಗಾರು ದುರ್ಬಲಗೊಂಡಿದೆ. ಜೂನ್ 21ರ ಬಳಿಕ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಹೆಚ್ಚಿದ ಬಳಿಕ ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗು ದಕ್ಷಿಣ ಒಳನಡಿನಲ್ಲಿ ಸಾಧಾರಣ ಮಳೆಯಾಗಲಿದೆ.
ಜೂನ್ 21ರಿಂದ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಕೋಲಾರ,ರಾಮನಗರ, ಮಂಡ್ಯ, ಮೈಸೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ