
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ನಾಳೆಯೇ ನಡೆಯಲಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆ ನಡೆದಿದೆ.
ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರು ಬಹುತೇಕ ಖಚಿತವಾಗಿದೆ. ಹೈಕಮಾಂಡ್ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಈ ನಡುವೆ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಬೆಂಗಳೂರಿನ ಕಂಠೀರವ ಕ್ರಿದಾಂಗನದಲ್ಲಿ ನಾಳೆ ಮಧ್ಯಾಹ್ನ 3:30ಕ್ಕೆ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ನಡೆಯಲಿದೆ. ನೂತನ ಮುಖ್ಯಮಂತ್ರಿಯಗೈ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮಾಣವಚನಕ್ಕೆ ಭಾರಿ ಸಿದ್ಧತೆ ನಡೆಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕಂಠೀರವ ಸೇಡಿಯಂ ಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಂಠೀರವ ಸ್ಟೇಡಿಯಂ ನಲ್ಲಿ ಸುಮಾರು 50 ಸಾವಿರ ಜನರಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಗಣ್ಯರು, ಶಾಸಕರು, ಸಾರ್ವಜನಿಕರಿಗಾಗಿ ಪ್ರತ್ಯೆಕ ವ್ಯವಸ್ಥೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ