
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.
ಕರ್ನಾಟಕದ ನೂತನ ರಾಜ್ಯಪಾಲರಾಗಿ ಮಾಜಿ ಸಂಸದೆ ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಇವರು ಕರ್ನಾಟಕಕ್ಕೆ ಎರಡನೇ ಮಹಿಳಾ ರಾಜ್ಯಪಾಲರಾಗಿದ್ದಾರೆ.
5 ವರ್ಷಗಳ ಬಳಿಕ ಕರ್ನಾಟಕ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದೆ. ಕರ್ನಾಟಕ ಸೇರಿ 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಸುಧಾ ಯಾದವ್ ಅವರು ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲರು ಎನಿಸಿಕೊಂಡಿದ್ದಾರೆ.
ಈ ಹಿಂದೆ 1999ರಿಂದ 2002ರವರೆಗೆ ವಿ.ಎಸ್ ರಮಾದೇವಿ ಅವರು ಕರ್ನಾಟಕದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದರು.
ಇನ್ನು ಸಿಕ್ಕಿಂನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕೇರಳದ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಬ್ರಜ್ ಮೋಹನ್ ರಾಮ್ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಡಾ. ಧಲ್ ಸಿಂಗ್ ಬಿಸೆನ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ಹಾಗೂ ದುಷ್ಯಂತ್ ಗೌತಮ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




