Latest

ಬಸ್ ಸಂಚಾರ: ಸರಕಾರದ ಗೊಂದಲ ; ಖಾಸಗಿ ವಾಹನ ಮಾಲಿಕರ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಇಂದು ರಾತ್ರಿಯಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದ್ದು, ರಾತ್ರಿ 10 ಗಂಟೆಯಿಂದ ಕೆಎಸ್ಆರ್ ಟಿಸಿ ಸೇರಿದಂತೆ ಬಸ್ ಸಂಚಾರವಿರುವುದಿಲ್ಲ ಎಂದು ಹೇಳಿಕೆ ನೀಡಿದ್ದ ರಾಜ್ಯ ಸರ್ಕಾರ ಈಗ ಬಸ್ ಸಂಚಾರಕ್ಕೆ ಅಡ್ದಿಯಿಲ್ಲ ಎನ್ನುವ ಮೂಲಕ ಗೊಂದಲ ಸೃಷ್ಟಿಸಿದೆ.

ಇದರಿಂದಾಗಿ ಖಾಸಗಿ ವಾಹನ ಮಾಲಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಬೆಳಗಾವಿಯಲ್ಲಿ ಮಾತನಾಡಿರುವ ಸವದಿ,  ನೈಟ್ ಕರ್ಫ್ಯೂ ವೇಳೆ ಕೆಎಸ್ಆರ್ ಟಿಸಿ ಹಾಗೂ ಖಾಸಗಿ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಾಗಲ್ಲ. ಎಂದಿನಂತೆ ಬಸ್ ಸಂಚಾರವಿರಲಿದೆ. ಬಸ್ ಸಂಚಾರದಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಸಿಎಂ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಇದರಿಂದಾಗಿ ರೊಚ್ಚಿಗೆದ್ದಿರುವ ಟ್ಯಾಕ್ಸಿ, ಕ್ಯಾಬ್ ಹಾಗೂ ಆಟೋ ಚಾಲಕರು ನೈಟ್ ಕರ್ಫ್ಯೂ ವೇಳೆ ಬಸ್ ಸಂಚಾರಕ್ಕೆ ಅವಕಾಶವಿರುವುದಾದರೆ ನಾವೂ ಕೂಡ ವಾಹನಗಳನ್ನು ರಸ್ತೆಗಿಳಿಸುತ್ತೇವೆ ಎಂದು ಹೇಳಿದ್ದಾರೆ. ಸಾರ್ವಜನಿಕರು 10 ಗಂಟೆ ಬಳಿಕ ಮನೆಯಿಂದ ಹೊರಬರದಂತೆ ಸರ್ಕಾರವೇ ಆದೇಶ ನೀಡಿ, ಈಗ ಬಸ್ ಸಂಚಾರಕ್ಕೆ ಅವಕಾಶ ನೀಡುವ ಮೂಲಕ ಜನರ ಓಡಾಟಕ್ಕೆ ಅವಕಾಶ ನೀಡುತ್ತಿರುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದಿನಿಂದ ರಾಜ್ಯದಲ್ಲಿ ನೈಟ್ ಕಫ್ಯೂ ಜಾರಿ

Related Articles

Back to top button