Latest

ಇಬ್ಬರು ಮಕ್ಕಳು ಸೇರಿ ರಾಜ್ಯದಲ್ಲಿ ಒಂದೇ ದಿನ 12 ಜನರಲ್ಲಿ ಒಮಿಕ್ರಾನ್ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕ್ಷಣ ಕ್ಷಣಕ್ಕೂ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 12 ಜನರಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ವಿವರಿಸಿರುವ ಸಚಿವ ಸುಧಾಕರ್, ಯುಕೆಯಿಂದ ಬೆಂಗಳೂರಿಗೆ ಆಗಮಿಸಿರುವ 11 ವರ್ಷದ ಬಾಲಕ, ಸ್ವಿಜರ್ಲ್ಯಾಂಡ್ ನಿಂದ ಮೈಸೂರಿಗೆ ಆಗಮಿಸಿರುವ 9 ವರ್ಷದ ಬಾಲಕಿ, ನೈಜಿರಿಯಾದಿಂದ ಬೆಂಗಳೂರಿಗೆ ಆಗಮಿಸಿರುವ 59 ವರ್ಷದ ಮಹಿಳೆಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.

ಯುಕೆಯಿಂದ ಬೆಂಗಳೂರಿಗೆ ಆಗಮಿಸಿರುವ 31 ವರ್ಷದ ವ್ಯಕ್ತಿ, 42 ವರ್ಷದ ವ್ಯಕ್ತಿ, 18 ವರ್ಷದ ಯುವತಿ ಹಾಗೂ 21 ವರ್ಷದ ವ್ಯಕ್ತಿ ಹಾಗೂ ಡೆನ್ಮಾರ್ಕ್ ನಿಂದ ಬೆಂಗಳೂರಿಗೆ ಆಗಮಿಸಿದ 49 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.

ಘಾನಾದಿಂದ ಮಂಗಳೂರಿಗೆ ಆಗಮಿಸಿರುವ 27 ವರ್ಷದ ವ್ಯಕ್ತಿ ಹಾಗೂ ಬೆಂಗಳೂರಿನ 20 ವರ್ಷದ ಯುವತಿ, 56 ವರ್ಷದ ವ್ಯಕ್ತಿ, 54 ವರ್ಷದ ಮಹಿಳೆಯಲ್ಲಿ ವೈರಸ್ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಒಂದೇ ಕುಟುಂಬದ ನಾಲ್ವರಲ್ಲಿ ಒಮಿಕ್ರಾನ್ ಸೋಂಕು ದೃಢ

Related Articles

Back to top button