ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇನ್ಮುಂದೆ ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಹೆಚ್ಚಳವಾಗಲಿದೆ.
ಪೆಟ್ರೋಲ್, ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ. ತೆರಿಗೆ ದರ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ ದರ 3.50 ರೂ ಹೆಚ್ಚಳ ವಾಗಲಿದೆ.
ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ.25.92ರಷ್ಟಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ.29.84ಕ್ಕೆ ಏರಿಕೆ ಮಾಡಲಾಗಿದೆ. ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ.14.34ರಷ್ಟಿತ್ತು. ಈಗ ಶೇ.4.1ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ.18.44ಕ್ಕೆ ಏರಿಕೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ