Latest

*ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿನಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕದ ವಾತಾವರಣದಲ್ಲಿ ಬದಲಾವಣೆಯಾಗಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ,ರಾಯಚೂರು,ಕಲಬುರ್ಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರಿ ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳಲ್ಲಿ ಗುದುಗು ಸಹಿತ ಮಳೆಯಾಗುವ ಸಾಧ್ಯತೆ ಇದೆದ್.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಯೂ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

https://pragati.taskdun.com/siddaramaiahquestionup-cm-yogi-adityanath/

Related Articles

Back to top button