Karnataka News

*ಭಾರಿ ಮಳೆ ಎಚ್ಚರಿಕೆ; ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಜೂನ್ 24ರಂದು ವ್ಯಾಪಕ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಧಾರವಾಡ, ಬೀದರ್, ಚಿತ್ರದುರ್ಗ, ಹಾವೇರಿ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಇಂದು ಮಳೆಯಾಗಲಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button