
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಅಲ್ಲದೇ ದಕ್ಷಿಣ ಒಳನಾಡಿನ 8 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ತುಮಕೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.
ಬಾಗಲಕೋಟೆ, ಗದಗ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ