ಹವಾಮಾನ ಇಲಾಖೆ ಮುನ್ಸೂಚನೆ
ಪ್ರಗತಿವಾಹಿನಿ ಸುದ್ದಿ: ಬರಗಾಲ ಹಾಗೂ ಬಿಸಿಲ ಝಳದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವರಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಮುಂದಿನ ಒಂದುವಾರಗಳ ಕಾಲ ಅಧಿಕ ಮಳೆಯಾಗಲಿದೆ. ಮೈಸೂರು, ಕೊಡಗು, ಬೀದರ್ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ. ಕೊಪ್ಪಳದಲ್ಲಿ ಮಾರ್ಚ್ 21ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳುರು ನಗರ, ಚಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಾರ್ಚ್ 22ರಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ.
ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಒಂದುವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ