ಪ್ರಗತಿವಾಹಿನಿ ಸುದ್ದಿ: ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚುತ್ತಿದೆ. ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ. ಮತ್ತೊಂದೆಡೆ ವಿಪರೀತ ಸೆಕೆಯಿಂದ ಜನರು ಬಸವಳಿದು ಹೋಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಕಹೆ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಬೀದರ್, ಧಾರವಾಡ, ವಿಜಯಪುರ, ಕಲಬುರ್ಗಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಹೆಚ್ ಎ ಎಲ್ ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಟ ಉಷ್ಣಾಂಶ ದಾಖಲಾಗಿದೆ.
ದೆಹಲಿ, ಉತ್ತರಪ್ರದೇಶದ ಘಾಜಿಯಾಬಾದ್, ನೊಯ್ಡಾ, ಅರುಣಾಚಲಪ್ರದೇಶ, ಅಸ್ಸಾಂ, ಮೆಘಾಲಯ, ಮಿಜೋರಾಂ, ಜಾರ್ಖಂಡ್, ಛತ್ತೀಸ್ ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ ಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ಕೆಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ