Latest

ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ; ಬೆಳಗಾವಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ;  ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಸಧ್ಯಕ್ಕೆ ಮಳೆಯ ಅಬ್ಬರ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಕರ್ನಾಟಕದ 10 ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ.

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವೆಡೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ನಾಳೆ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಕಲಬುರ್ಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಗ್ರಾಮಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಇನ್ನೆರೆಡುದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನ ಉತ್ತರ ಭಾಗದಲ್ಲಿ ಮಳೆ ಹೆಚ್ಚಿದ್ದು, ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುತ್ತಿದೆ.
ಬೆಳಗಿನ ವಾಕಿಂಗ್‌ನ 13 ಅದ್ಭುತ ಪ್ರಯೋಜನಗಳು

https://pragati.taskdun.com/article/13-amazing-benefits-of-morning-walking/

Related Articles

Back to top button