ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ಒಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಇಂದು ಬೆಳಿಗ್ಗೆಯಿಂದ ಕೊಂಚ ತಣ್ಣಗಾಗಿದೆ ಎನ್ನುವಷ್ಟರಲ್ಲೇ ಹವಾಮಾನ ಇಲಾಖೆ ಮತ್ತೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅರಬ್ಬಿ ಸಮುದ್ರ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವುದರಿಂದ ರಾಜ್ಯಾದ್ಯಂತ ಮಳೆ ಅಬ್ಬರಿಸಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಹಾವೇರಿ, ಕಲಬುರ್ಗಿ, ವಿಜಯಪುರ,ಯಾದಗಿರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಕೊಡಗು, ಹಾಸನ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿಸೇರಿದಂತೆ ಹಲವೆಡೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ತಿಳಿಸಿದೆ.
ಕಾರಾವಳಿ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಇಂದಿನಿಂದ ಮೂರು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಕಾಂಗ್ರೆಸ್ ಗೆ ಮತ್ತೊಂದು ಶಾಕ್; ರಾಜೀನಾಮೆ ಘೋಷಿಸಿದ ಮಾಜಿ ಸಂಸದ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ