ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಮಂಡ್ಯ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುದುವರೆಯಲಿದೆ.
ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶ ಉತ್ತರ ಒಳಾನಾಡಿನಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ