Latest

*ಬಿರುಗಾಳಿ ಸಹಿತ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಬೇಸಿಗೆ ಸೆಕೆಯಿಂದ ಬಸವಳಿದಿದ್ದ ಸಿಲಿಕಾನ್ ಸಿಟಿ ಜನರಿಗೆ ವರುಣದೇವ ತಂಪೆರೆದಿದ್ದಾನೆ.

Home add -Advt

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

https://pragati.taskdun.com/karnatakarain-updateimd-3/

Related Articles

Back to top button