Kannada NewsKarnataka NewsLatest

*ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಭರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬಳ್ಳಾರಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕಲಬುರ್ಗಿ, ರಾಯಚೂರು, ವಿಜಯಪುರ, ಯದಗಿರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಹಾಸಾನ , ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Home add -Advt

ಇನ್ನು ರಾಜ್ಯದಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕೀಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆಯಾಗಲಿದೆ.

Related Articles

Back to top button