Latest

ಇಂದಿನಿಂದ ಮತ್ತೆ ಭಾರಿ ಮಳೆ ಎಚ್ಚರಿಕೆ; ಆರೆಂಜ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ವರುಣಾರ್ಭಟ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು, ಕೊಡಗು ಜಿಲ್ಲೆಗಳಲ್ಲಿ ಸೆ.6ವರೆಗೂ ಭಾರಿ ಮಳೆಯಾಗಲಿದೆ. ಈಗಾಗಲೇ ಮಳೆ ಅಬ್ಬರದಿಂದ ತತ್ತರಿಸಿರುವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ಆತಂಕಕ್ಕೆ ಕಾರಣವಾಗಿದೆ.

Home add -Advt

ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರ್ಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು, ರಾಮನಗರ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೋಮವಾರದಿಂದ ಬೆಳಗಾವಿ, ರಾಯಚೂರು, ಬಳ್ಲಾರಿ, ಯಾದಗಿರಿ, ಧಾರವಾಡ, ಗದಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಮದುರ್ಗ- ದೊಡಮಂಗಡಿ ಮಧ್ಯದ ಸೇತುವೆ ಮುಳುಗಡೆ

Related Articles

Back to top button