Latest

*ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಕರಾವಳಿ ಜಿಲ್ಲೆಗಳು ದಕ್ಷಿಣ ಒಳನಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರಿಗೆ, ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತಗಳು ಸೂಚಿಸಿವೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ದಾವಣಗೆರೆ, ಧಾರವಾಡ, ಹಾವೇರಿ, ಗದಗ ಜಿಲ್ಲೆಯಗಾಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗಲಿದೆ. ಮೇ 24ರಿಂದ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

Back to top button