Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ಮೂರು ದಿನಗಳಿಂದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 12ವರೆಗೂ ಮಳೆ ಮುಂದುವರೆಯಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಉತ್ತರ ಕನ್ನಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಧಾರವಾಡ, ಕಲಘಟಗಿಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button