ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನದಲ್ಲಿ 33 ಮೀ.ಮೀ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕಲಬುರ್ಗಿಯಲ್ಲಿ ಅತ್ಯಧಿಕ 41.8 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ತಾಪಮಾನ ಹೆಚ್ಚಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ