ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ವರ್ಷ ರಾಜ್ಯದಲ್ಲಿ ಮಳೆಗಾಲ ಮುಗಿದರೂ ಮಳೆರಾಯನ ಅಬ್ಬರ ಮಾತ್ರ ನಿಲ್ಲುತ್ತಿಲ್ಲ. ಡಿಸೆಂಬರ್ 21ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ.
ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ. ಚಂಡಮಾರುತದ ಪರಿಣಾಮ ಕಳೆದವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, ಶೀತಗಾಳಿಯುಂಟಾಗಿತ್ತು. ಇದರಿಂದ ಜನರ ಆರೋಗ್ಯದ ಮೇಲೂ ದುಷ್ಪರಿಣಾಮಗಳು ಬೀರಿವೆ. ರಾಜ್ಯಾದ್ಯಂತ ಬಹುತೇಕ ಮೋಡಕವಿದವಾತಾವರಣ, ಚಳಿ ಇನ್ನೂ ಕೆಲದಿನಗಳವರೆಗೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.
ಬೆಳಗಾವಿ ಅಧಿವೇಶನದ ಮೊದಲ ದಿನ 2 ಪ್ರಮುಖ ನಿರೀಕ್ಷೆ
https://pragati.taskdun.com/2-major-expectations-on-the-first-day-of-belgaum-session/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ