Latest

*ಮುಂದಿನ ಎರಡು ದಿನಗಳಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ಕಾಲ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಬಿರುಗಾಳಿ, ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದ್ದು ರಾಜ್ಯದಲ್ಲಿ ಮಳೆ ಆರ್ಭಟ ಇನ್ನೂ ಎರಡು ದಿನ ಮುಂದುವರೆಯಲಿದೆ.

Home add -Advt

ಇಂದು ಹಾಗೂ ನಾಳೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

https://pragati.taskdun.com/karnatakarainbangalore/


Related Articles

Back to top button