Latest

*ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಂಡೌಸ್ ಚಂಡಮಾರುತದ ಅಬ್ಬರ ತಣ್ಣಗಾಗಿದ್ದು, ಮಳೆಯ ಆರ್ಭಟ ಕಡಿಎಯಾಗಿರುವ ಬೆನ್ನಲ್ಲೇ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 19ರಿಂದ 2 ದಿನಗಳ ಕಾಲ ಮತ್ತೆ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಲೆಯಾಗಲಿದ್ದು, ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಇಂದಿನಿಂದ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

41 ಲಕ್ಷ ರೂ. ವೆಚ್ಚದಲ್ಲಿ ನಾಗೇರಹಾಳ ಗ್ರಾಮದ ರಸ್ತೆಗಳ ಅಭಿವೃದ್ಧಿ

https://pragati.taskdun.com/41-lakh-rs-development-of-roads-in-nagerahala-village-at-cost/

*Good News for weavers*

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button