Kannada NewsKarnataka NewsLatest

*ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕರಾವಳಿ ಹಾಗೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button