Karnataka News

*ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ*

ಪ್ರಗತಿವಾಹಿನಿ ಸುದ್ದಿ: ಈಗಾಗಲೇ ಫೆಂಗಾಲ್ ಚಂಡಮಾರುತದ ಪರಿಣಾಮವಾಗಿ ರಾಜ್ಯಾದ್ಯಂತ ಮೋಡಕವಿದ ವಾತಾವರಣ, ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಂತೂ ಮೈ ಕೊರೆವ ಚಳಿಯೊಂದಿಗೆ ಪಿರಿಪಿರಿ ಮಳೆ ವೀಕೆಂಡ್ ನಲ್ಲಿಯೂ ಜನರನ್ನು ಮನೆಯಿಂದ ಹೊರಬರಲಾಗದಂತೆ ಮಾಡಿದೆ

ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿಯೂ ಡಿಸೆಂಬರ್ 3ರವರೆಗೆ ಮಳೆಯಾಗಲಿದೆ.

ಗಾಳಿಯ ವೇಗ ಗಂಟೆಗೆ 90 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಡಿ.3ರವರೆಗೆ ಚದುರಿದ ರೀತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button