ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೈ ಕೊರೆವ ಚಳಿ ಜೊತೆ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಡಿಸೆಂಬರ್ 28ರವರೆಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬೆಳಿಗ್ಗೆ ರಾಜಧಾನಿ ಬೆಂಗಳೂರಿನ ವಿವಿಧೆಡೆಗಳಲ್ಲಿ ತುಂತುರು ಮಳೆಯಾಗಿದೆ. ಬೆಂಅಗ್ಳೂರಿನಾದ್ಯಂತ ದಟ್ಟ ಮೋದಕವಿದ ವಾತಾವರಣ ಚಳಿ ಮುಂದುವರೆದಿದೆ. ಆಗಾಗ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ದಕ್ಷಿಣ ಕನ್ನಡ, ಉಡುಪಿ, ಉತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು, ರಾಮನಗರ, ಬೆಂಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮುಂದಿನ 5 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಒಣ ಹವೆ ಕೂಡ ಮುಂದುವರೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ