Kannada NewsKarnataka NewsLatest
*ಡೀನ್ ಕುರುಕುಳ; ನೊಂದ ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡೀನ್ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಎ ಎಂಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಹೊಟೇಲ್ ಮ್ಯಾನೇಜ್ ಮೆಂಟ್ ವಿಭಾಗದಲ್ಲಿ ಓದುತ್ತಿದ್ದ. ಕಳೆದ ಒಂದು ತಿಂಗಳಿಂದ ಕಾಲೇಜಿನ ಡೀನ್ ವಿದ್ಯಾರ್ಥಿಗೆ ಕಿರುಕುಳ ನೀಡುತ್ತಿದ್ದರು. ಅಲ್ಲದೇ ತಾಯಿ ಎದುರೇ ವಿದ್ಯಾರ್ಥಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ಕಾಲೇಜಿನಿಂದ ಮನೆಗೆ ವಾಪಾಸ್ ಆದ ವಿದ್ಯಾರ್ಥಿ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಆತನನ್ನು ನಾಗರಬಾವಿ ಬಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.




