
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಚಳಿ, ಒಣ ಹವೆ ಮುಂದುವರೆದಿರುವ ನಡುವೆಯೇ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಪೂರ್ವೋತ್ತರ ಮಾರುತಗಳು ಹಾದು ಹೋಗುವ ಕಾರಣ ಫೆ.1ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗ್ರ, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಫೆ.1 ಹಾಗೂ 2ರಂದು ಸಾಧಾರಣ ಮಳೆಯಾಗಲಿದೆ.
ಚಿಕ್ಕಮಗಳೂರು, ಉಡುಪಿ, ಕೊಡಗು, ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಫೆಬ್ರವರಿ 2 ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.